ಬೆಂಗಳೂರು, 2 ಡಿಸೆಂಬರ್ 2021
ವಿಕಾಸ ಟ್ರಸ್ಟ್ ನಡೆಸುತ್ತಿರುವ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ 32ನೇ ದಿನದ ಕಾಸರಗೋಡು ಮತ್ತು ಗಡಿ ಮಾಹಿತಿ ಪತ್ರವನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕಾಸರಗೋಡು ಜಿಲ್ಲೆಯ ಜನರು ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ಎದುರಿಸುತ್ತಿವ ಸಮಸ್ಯೆಗಳನ್ನು ಪ್ರಸ್ತಾಪಿಸಿದ ನಿಯೋಗ ಮಂಜೇಶ್ವರ ಮತ್ತು ಕಾಸರಗೋಡು ತಾಲ್ಲೂಕುಗಳ ಜನರಿಗೆ ಕೋವಿಡ್-19 ಪರೀಕ್ಷೆಯಿಂದ ವಿನಾಯಿತಿ ನೀಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿತು. ನಿಯೋಗದಲ್ಲಿ ವಿಕಾಸ ಟ್ರಸ್ಟ್ ನ ಅಧ್ಯಕ್ಷರಾದ ರವಿನಾರಾಯಣ ಗುಣಾಜೆ, ಸದಸ್ಯ ಸೂರ್ಯನಾರಾಯಣ ಬೋರ್ಕರ್ ಉಪಸ್ಥಿತರಿದ್ದರು.
ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತುಗಳ, ಬ್ಲಾಕ್ (ತಾಲ್ಲೂಕು) ಪಂಚಾಯತುಗಳ, ವಿಧಾನಸಭಾ ಕ್ಷೇತ್ರಗಳ ಹೆಸರು ಕನ್ನಡ ಭಾಷೆಯಲ್ಲಿ ದಾಖಲಿಸಿರುವ ಕಾಸರಗೋಡು ಜಿಲ್ಲಾ ನಕ್ಷೆಯನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ. Kasaragod District Map in Kannada