ಅನಂತಪುರ, 26 ಫೆಬ್ರವರಿ 2022:
ಕಾಸರಗೋಡು ಜಿಲ್ಲೆಯ ಪ್ರಸಿದ್ಧ ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ವಾರ್ಷಿಕ ಮಹೋತ್ಸವದ ಅಂಗವಾಗಿ ಶ್ರೀ ಕ್ಷೇತ್ರದ Website ನ ನವೀಕೃತ ವಿನ್ಯಾಸ, ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಬ್ಯಾಂಕ್ ಖಾತೆಯ UPI QR Code ಮತ್ತು ಶ್ರೀ ಕ್ಷೇತ್ರದ ಭಕ್ತಾಭಿಮಾನಿಗಳಿಗೆ ಮಾಹಿತಿ ನೀಡಲು ದೇವಳದ WhatsApp ನಂಬರ್ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ವಿಕಾಸ ಟ್ರಸ್ಟ್ (ರಿ.) ಸಂಸ್ಥೆಯು ನಡೆಸಿದ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನದ ಮಾಹಿತಿ ಪತ್ರಗಳ ಪ್ರದರ್ಶನವನ್ನು ಕುಂಬಳೆ ಪೊಲೀಸ್ ವೃತ್ತ ನಿರೀಕ್ಷಕ ಪ್ರಮೋದ್ ಪಿ. ಅವರು ಉದ್ಘಾಟಿಸಿದರು.
ಮಾಹಿತಿ ಅಭಿಯಾನದ 67ನೇ ದಿನ ಶ್ರೀ ಕ್ಷೇತ್ರದ ಕುರಿತು ಬಿಡುಗಡೆ ಮಾಡಿದ ಮಾಹಿತಿ ಪತ್ರದ ಪ್ರತಿಗಳನ್ನು ವಿಕಾಸ ಟ್ರಸ್ಟ್ ಅಧ್ಯಕ್ಷರಾದ ರವಿನಾರಾಯಣ ಗುಣಾಜೆ ಅವರು ಶ್ರೀ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷರಾದ ಉದಯ ಕುಮಾರ್ ಗಟ್ಟಿ ಅವರಿಗೆ ಹಸ್ತಾಂತರಿಸಿದರು. ಶ್ರೀ ಕ್ಷೇತ್ರದ ವಾರ್ಷಿಕ ಮಹೋತ್ಸವಕ್ಕೆ ಆಗಮಿಸಿದ ಸಾವಿರಾರು ಭಕ್ತರು ಪ್ರದರ್ಶನವನ್ನು ವೀಕ್ಷಿಸಿದರು.