ಮಾಹಿತಿ ಪತ್ರಗಳ ಪ್ರದರ್ಶನ

ಬೆಂಗಳೂರು, 8 ಫೆಬ್ರವರಿ 2022:
ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಡಾ. ಜಯದೇವಿ ತಾಯಿ ಲಿಗಾಡೆ ಮತ್ತು ಕಯ್ಯಾರ ಕಿಂಞ್ಞಣ್ಣ ರೈ ಹೆಸರಿನಲ್ಲಿ ಸ್ಥಾಪಿಸಿರುವ ಗಡಿನಾಡ ಚೇತನ ಪ್ರಶಸ್ತಿ ಪ್ರದಾನ ಸಮಾರಂಭವು 10 ಫೆಬ್ರವರಿ 2022ರಂದು ಸಂಜೆ 6.00 ಗಂಟೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿದೆ.

ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಎಸ್. ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ವಿ. ಸುನಿಲ್ ಕುಮಾರ್, ಹಿರಿಯ ಸಾಹಿತಿ ನಾಡೋಜ ಪ್ರೊ. ಹಂ.ಪ. ನಾಗರಾಜಯ್ಯ ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ.

ಪ್ರದರ್ಶನ ಉದ್ಘಾಟನೆ:
ಡಾ. ಸಿ. ಸೋಮಶೇಖರ, ಐ.ಎ.ಎಸ್. (ನಿ)
ಅಧ್ಯಕ್ಷರು, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ

ಸಮಯ: ಸಂಜೆ 5.00 ರಿಂದ
ದಿನಾಂಕ: 10 ಫೆಬ್ರವರಿ 2022, ಗುರುವಾರ
ಸ್ಥಳ: ಗಾಂಧಿ ಭವನ, ಕುಮಾರಕೃಪಾ ರಸ್ತೆ, ಬೆಂಗಳೂರು

ತಮಗೆ ಆದರದ ಸ್ವಾಗತ

ಅಧ್ಯಕ್ಷರು ಮತ್ತು ಸದಸ್ಯರು,
ವಿಕಾಸ ಟ್ರಸ್ಟ್ (ರಿ.)