ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನ ಉದ್ಘಾಟಿಸಿದ ಸಚಿವ ವಿ. ಸುನಿಲ್ ಕುಮಾರ್

1 ನವೆಂಬರ್ 2021, ಬೆಂಗಳೂರು:
ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮತ್ತು ರಾಜ್ಯೋತ್ಸವದ ಅಂಗವಾಗಿ ವಿಕಾಸ ಟ್ರಸ್ಟ್ ನಡೆಸುವ ಕಾಸರಗೋಡು ಕನ್ನಡ ವಿಕಾಸ ಮಾಹಿತಿ ಅಭಿಯಾನವನ್ನು ಕರ್ನಾಟಕ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ಪ್ರಥಮ ದಿನದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ವಿಕಾಸ ಟ್ರಸ್ಟ್ ಅಧ್ಯಕ್ಷರಾದ ರವಿನಾರಾಯಣ ಗುಣಾಜೆ, ಸದಸ್ಯರಾದ ಸುಖೇಶ್ ರೈ ಮತ್ತು ಧನ್ಯಶ್ರೀ ಮುಂತಾದವರು ಉಪಸ್ಥಿತರಿದ್ದರು.

ಕಾಸರಗೋಡು ಮತ್ತು ಕನ್ನಡ ಭಾಷೆಗೆ ಸಂಬಂಧಪಟ್ಟ ವ್ಯಕ್ತಿಗಳ, ಸಂಘ-ಸಂಸ್ಥೆಗಳ, ಪ್ರೇಕ್ಷಣೀಯ ಸ್ಥಳಗಳ ಕುರಿತು ಮಾಹಿತಿ ನೀಡುವ ಈ ಡಿಜಿಟಲ್ ಅಭಿಯಾನವು ನವೆಂಬರ್ 1 ರಿಂದ ಜನವರಿ 14 ರವರೆಗೆ 75 ದಿನಗಳ ಕಾಲ ವಿಕಾಸ ಟ್ರಸ್ಟಿನ ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ನಡೆಯಲಿದೆ.